ನಾನು ಐದು ವೇಳೆಯ ಕಡ್ಡಾಯ ನಮಾಝ್‌ಗಳನ್ನು ನಿರ್ವಹಿಸಿದರೆ, ರಮದಾನ್ ತಿಂಗಳಲ್ಲಿ ಉಪವಾಸ ಆಚರಿಸಿದರೆ, ಧರ್ಮಸಮ್ಮತವಾಗಿರುವುದನ್ನು ಧರ್ಮಸಮ್ಮತವೆಂದು ಮತ್ತು ಧರ್ಮನಿಷಿದ್ಧವಾಗಿರುವುದನ್ನು ಧರ್ಮನಿಷಿದ್ಧವೆಂದು ಪರಿಗಣಿಸಿದರೆ...

Scan the qr code to link to this page

ಹದೀಸ್
ವಿವರಣೆ
ಅನುವಾದಗಳನ್ನು ತೋರಿಸಿ
ಹದೀಸಿನ ಪ್ರಯೋಜನಗಳು
ವರ್ಗಗಳು
ಇನ್ನಷ್ಟು
ಜಾಬಿರ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಒಬ್ಬ ವ್ಯಕ್ತಿ ಅಲ್ಲಾಹನ ಸಂದೇಶವಾಹಕರೊಂದಿಗೆ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಕೇಳಿದರು: "ನಾನು ಐದು ವೇಳೆಯ ಕಡ್ಡಾಯ ನಮಾಝ್‌ಗಳನ್ನು ನಿರ್ವಹಿಸಿದರೆ, ರಮದಾನ್ ತಿಂಗಳಲ್ಲಿ ಉಪವಾಸ ಆಚರಿಸಿದರೆ, ಧರ್ಮಸಮ್ಮತವಾಗಿರುವುದನ್ನು ಧರ್ಮಸಮ್ಮತವೆಂದು ಮತ್ತು ಧರ್ಮನಿಷಿದ್ಧವಾಗಿರುವುದನ್ನು ಧರ್ಮನಿಷಿದ್ಧವೆಂದು ಪರಿಗಣಿಸಿದರೆ, ಮತ್ತು ಇವುಗಳಿಗಿಂತ ಹೆಚ್ಚು ಏನೂ ನಿರ್ವಹಿಸದಿದ್ದರೆ, ನಾನು ಸ್ವರ್ಗಕ್ಕೆ ಹೋಗುವೆನೇ?" ಅವರು ಉತ್ತರಿಸಿದರು: "ಹೌದು." ಆ ವ್ಯಕ್ತಿ ಹೇಳಿದರು: "ಅಲ್ಲಾಹನಾಣೆ! ನಾನು ಅವುಗಳಿಗಿಂತ ಏನೂ ಹೆಚ್ಚಿಸುವುದಿಲ್ಲ."
Sahih/Authentic. - Muslim

ವಿವರಣೆ

ಈ ಹದೀಸ್‌ನಲ್ಲಿ ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ವಿವರಿಸುವುದೇನೆಂದರೆ, ಒಬ್ಬ ವ್ಯಕ್ತಿ ಯಾವುದೇ ಐಚ್ಛಿಕ ನಮಾಝ್‌ಗಳನ್ನು ನಿರ್ವಹಿಸದೆ ಕೇವಲ ಐದು ವೇಳೆಯ ಕಡ್ಡಾಯ ನಮಾಝ್‌ಗಳನ್ನು ಮಾತ್ರ ನಿರ್ವಹಿಸಿದರೆ, ಮತ್ತು ಯಾವುದೇ ಐಚ್ಚಿಕ ಉಪವಾಸಗಳನ್ನು ಆಚರಿಸದೆ ಕೇವಲ ರಮದಾನ್ ತಿಂಗಳಲ್ಲಿ ಮಾತ್ರ ಉಪವಾಸ ಆಚರಿಸಿದರೆ, ಮತ್ತು ಧರ್ಮಸಮ್ಮತವಾಗಿರುವುದನ್ನು ಧರ್ಮಸಮ್ಮತವೆಂದು ಪರಿಗಣಿಸಿ ಅವುಗಳನ್ನು ನಿರ್ವಹಿಸಿದರೆ, ಮತ್ತು ಧರ್ಮನಿಷಿದ್ಧವಾಗಿರುವುದನ್ನು ಧರ್ಮನಿಷಿದ್ಧವೆಂದು ಪರಿಗಣಿಸಿ, ಅವುಗಳಿಂದ ದೂರ ಸರಿದರೆ, ಅವನು ಖಂಡಿತವಾಗಿಯೂ ಸ್ವರ್ಗಕ್ಕೆ ಹೋಗುತ್ತಾನೆ.

ಹದೀಸಿನ ಪ್ರಯೋಜನಗಳು

  1. ಕಡ್ಡಾಯ ಕಾರ್ಯಗಳನ್ನು ನಿರ್ವಹಿಸಲು ಮತ್ತು ನಿಷೇಧಿಸಲಾದ ಕಾರ್ಯಗಳನ್ನು ತೊರೆಯಲು ಮುಸಲ್ಮಾನನು ಉತ್ಸಾಹ ತೋರಬೇಕು, ಹಾಗೂ ಸ್ವರ್ಗ ಪ್ರವೇಶವು ಅವನ ಗುರಿಯಾಗಿರಬೇಕೆಂದು ಈ ಹದೀಸ್ ತಿಳಿಸುತ್ತದೆ.
  2. ಧರ್ಮಸಮ್ಮತವಾಗಿರುವ ಕಾರ್ಯಗಳನ್ನು ಮಾಡುವುದು ಮತ್ತು ಅವು ಧರ್ಮಸಮ್ಮತವೆಂದು ನಂಬುವುದರ ಮಹತ್ವವನ್ನು, ಹಾಗೆಯೇ ಧರ್ಮವು ನಿಷೇಧಿಸಿದ ಕಾರ್ಯಗಳಿಂದ ದೂರ ಸರಿಯುವುದು ಮತ್ತು ಅವು ಧರ್ಮನಿಷಿದ್ಧವೆಂದು ನಂಬುವುದರ ಮಹತ್ವವನ್ನು ಈ ಹದೀಸ್ ತಿಳಿಸುತ್ತದೆ.
  3. ಕಡ್ಡಾಯ ಕಾರ್ಯಗಳನ್ನು ನಿರ್ವಹಿಸುವುದು ಮತ್ತು ನಿಷೇಧಿತ ಕಾರ್ಯಗಳಿಂದ ದೂರವಾಗುವುದು ಸ್ವರ್ಗ ಪ್ರವೇಶಕ್ಕೆ ಕಾರಣವೆಂದು ಈ ಹದೀಸ್ ತಿಳಿಸುತ್ತದೆ.

ವರ್ಗಗಳು

ಯಶಸ್ವಿಯಾಗಿ ರವಾನಿಸಲಾಗಿದೆ!