ಯಾರು ಒಳಿತನ್ನು ತೋರಿಸಿಕೊಡುತ್ತಾರೋ ಅವನಿಗೆ ಆ ಒಳಿತು ಮಾಡಿದ ವ್ಯಕ್ತಿಗೆ ದೊರಕುವಷ್ಟೇ ಪ್ರತಿಫಲ ದೊರಕುತ್ತದೆ...

Scan the qr code to link to this page

ಹದೀಸ್
ವಿವರಣೆ
ಅನುವಾದಗಳನ್ನು ತೋರಿಸಿ
ಹದೀಸಿನ ಪ್ರಯೋಜನಗಳು
ವರ್ಗಗಳು
ಇನ್ನಷ್ಟು
ಅಬೂ ಮಸ್‌ಊದ್ ಅನ್ಸಾರಿ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಒಬ್ಬ ವ್ಯಕ್ತಿ ಪ್ರವಾದಿಯವರ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಬಳಿಗೆ ಬಂದು ಹೇಳಿದರು: "ನನ್ನ ಒಂಟೆ ಸುಸ್ತಾಗಿಬಿಟ್ಟಿದೆ. ಆದ್ದರಿಂದ ನನಗೆ ಸವಾರಿ ಮಾಡುವ ಒಂದು ಒಂಟೆಯನ್ನು ಕೊಡಿ." ಅವರು ಹೇಳಿದರು: "ನನ್ನ ಬಳಿ ಒಂಟೆಯಿಲ್ಲ." ಆಗ ಆ ವ್ಯಕ್ತಿ ಹೇಳಿದರು: "ಓ ಅಲ್ಲಾಹನ ಸಂದೇಶವಾಹಕರೇ! ಅವನಿಗೆ ಒಂಟೆ ಕೊಡುವ ವ್ಯಕ್ತಿಯನ್ನು ನಾನು ತೋರಿಸುತ್ತೇನೆ." ಆಗ ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಯಾರು ಒಳಿತನ್ನು ತೋರಿಸಿಕೊಡುತ್ತಾರೋ ಅವನಿಗೆ ಆ ಒಳಿತು ಮಾಡಿದ ವ್ಯಕ್ತಿಗೆ ದೊರಕುವಷ್ಟೇ ಪ್ರತಿಫಲ ದೊರಕುತ್ತದೆ."
Sahih/Authentic. - Muslim

ವಿವರಣೆ

ಒಬ್ಬ ವ್ಯಕ್ತಿ ಪ್ರವಾದಿಯವರ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಬಳಿಗೆ ಬಂದು ಹೇಳಿದರು: "ನನ್ನ ಒಂಟೆ ಸತ್ತಿದೆ. ನನ್ನನ್ನು ನನ್ನ ಊರಿಗೆ ತಲುಪಿಸುವ ಒಂದು ಒಂಟೆಯನ್ನು ಕೊಡಿ." ಆದರೆ, ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ತನ್ನಲ್ಲಿ ಸವಾರಿ ಮಾಡುವ ಒಂಟೆಯಿಲ್ಲವೆಂದು ಹೇಳಿದರು. ಆಗ ಅಲ್ಲಿದ್ದ ಒಬ್ಬ ವ್ಯಕ್ತಿ ಹೇಳಿದರು: "ಓ ಅಲ್ಲಾಹನ ಸಂದೇಶವಾಹಕರೇ! ಅವನಿಗೆ ಒಂಟೆಯನ್ನು ನೀಡುವ ವ್ಯಕ್ತಿಯನ್ನು ನಾನು ತೋರಿಸುತ್ತೇನೆ." ಆಗ ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ), ಒಂಟೆಯನ್ನು ದಾನ ಮಾಡುವ ವ್ಯಕ್ತಿಗೆ ಸಿಗುವ ಪ್ರತಿಫಲದಲ್ಲಿ ಇವನೂ ಭಾಗಿಯಾಗುತ್ತಾನೆಂದು ಹೇಳಿದರು. ಏಕೆಂದರೆ ಅವನು ಒಂಟೆಯ ಅಗತ್ಯವಿರುವ ಆ ವ್ಯಕ್ತಿಗೆ ಒಂಟೆ ನೀಡುವ ವ್ಯಕ್ತಿಯನ್ನು ತೋರಿಸಿಕೊಟ್ಟಿದ್ದಾನೆ.

ಹದೀಸಿನ ಪ್ರಯೋಜನಗಳು

  1. ಒಳಿತನ್ನು ತೋರಿಸಿಕೊಡಲು ಈ ಹದೀಸ್ ಪ್ರೇರೇಪಿಸುತ್ತದೆ.
  2. ಒಳಿತು ಮಾಡಲು ಪ್ರೋತ್ಸಾಹಿಸುವುದು ಮುಸ್ಲಿಂ ಸಮುದಾಯದ ಒಗ್ಗಟ್ಟು ಮತ್ತು ಏಕೀಕರಣಕ್ಕೆ ಕಾರಣವಾಗುತ್ತದೆ.
  3. ಸರ್ವಶಕ್ತನಾದ ಅಲ್ಲಾಹನ ಮಹಾ ಉದಾರತೆಯನ್ನು ಈ ಹದೀಸ್ ತಿಳಿಸುತ್ತದೆ.
  4. ಈ ಹದೀಸ್ ಒಂದು ಸಾಮಾನ್ಯ ನಿಯಮವನ್ನು ಹೊಂದಿದ್ದು, ಒಳಿತಿನ ಕಾರ್ಯಗಳೆಲ್ಲವೂ ಅದರಲ್ಲಿ ಒಳಪಡುತ್ತವೆ.
  5. ಅಗತ್ಯದಲ್ಲಿರುವವನ ಬೇಡಿಕೆಯನ್ನು ಈಡೇರಿಸಲು ಸಾಧ್ಯವಾಗದಿದ್ದರೆ, ಅದನ್ನು ಈಡೇರಿಸುವವರನ್ನು ತೋರಿಸಿಕೊಡಬೇಕೆಂದು ಈ ಹದೀಸ್ ತಿಳಿಸುತ್ತದೆ.

ವರ್ಗಗಳು

ಯಶಸ್ವಿಯಾಗಿ ರವಾನಿಸಲಾಗಿದೆ!