“ಯಾರು ಇತರರಿಗೆ ದಯೆ ತೋರುವುದಿಲ್ಲವೋ ಅವರಿಗೆ ಸರ್ವಶಕ್ತನಾದ ಅಲ್ಲಾಹು ದಯೆ ತೋರುವುದಿಲ್ಲ.”

Scan the qr code to link to this page

ಹದೀಸ್
ವಿವರಣೆ
ಅನುವಾದಗಳನ್ನು ತೋರಿಸಿ
ಹದೀಸಿನ ಪ್ರಯೋಜನಗಳು
ವರ್ಗಗಳು
ಇನ್ನಷ್ಟು
ಜರೀರ್ ಬಿನ್ ಅಬ್ದುಲ್ಲಾ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: “ಯಾರು ಇತರರಿಗೆ ದಯೆ ತೋರುವುದಿಲ್ಲವೋ ಅವರಿಗೆ ಸರ್ವಶಕ್ತನಾದ ಅಲ್ಲಾಹು ದಯೆ ತೋರುವುದಿಲ್ಲ.”
Sahih/Authentic. - Al-Bukhari and Muslim

ವಿವರಣೆ

ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಇಲ್ಲಿ ವಿವರಿಸುವುದೇನೆಂದರೆ, ಯಾರು ಮನುಷ್ಯರಿಗೆ ದಯೆ ತೋರುವುದಿಲ್ಲವೋ ಅವರಿಗೆ ಸರ್ವಶಕ್ತನಾದ ಅಲ್ಲಾಹು ದಯೆ ತೋರುವುದಿಲ್ಲ. ಅಲ್ಲಾಹನ ದಯೆಯನ್ನು ಪಡೆಯುವ ಅತಿದೊಡ್ಡ ಮಾರ್ಗವು ಸಹಜೀವಿಗಳಿಗೆ ದಯೆ ತೋರುವುದಾಗಿದೆ.

ಹದೀಸಿನ ಪ್ರಯೋಜನಗಳು

  1. ಎಲ್ಲಾ ಜೀವಿಗಳಿಗೂ ದಯೆಯ ಅಗತ್ಯವಿದೆ. ಆದರೆ ಇಲ್ಲಿ ವಿಶೇಷವಾಗಿ ಮನುಷ್ಯರ ಬಗ್ಗೆ ಹೇಳಿದ್ದು ಅವರಿಗೆ ಪ್ರಾಮುಖ್ಯತೆ ನೀಡುವುದಕ್ಕಾಗಿದೆ.
  2. ಅಲ್ಲಾಹು ದಯಾಳುವಾಗಿದ್ದಾನೆ. ದಯೆ ತೋರುವ ಅವನ ದಾಸರಿಗೆ ಅವನು ದಯೆ ತೋರುತ್ತಾನೆ. ಪ್ರತಿಫಲವು ಕರ್ಮದ ಅದೇ ವರ್ಗಕ್ಕೆ ಸೇರಿರುತ್ತದೆ.
  3. ಜನರಿಗೆ ದಯೆ ತೋರುವುದು ಎಂದರೆ ಅವರಿಗೆ ಒಳಿತು ಮಾಡುವುದು, ಅವರಿಗೆ ತೊಂದರೆಯಾಗದಂತೆ ನೋಡುವುದು ಮತ್ತು ಅವರೊಡನೆ ಅತ್ಯುತ್ತಮವಾಗಿ ವ್ಯವಹರಿಸುವುದು.

ವರ್ಗಗಳು

ಯಶಸ್ವಿಯಾಗಿ ರವಾನಿಸಲಾಗಿದೆ!